ಮುಂಬೈ: ಉತ್ತಮ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್ ಬಿರುದ್ಧ 23 ರನ್‌ಗಳಿಂದ ಗೆದ್ದು ಬೀಗಿದೆ.
ಮುಂಬೈನ ಡಿ.ವೈ.ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 15ನೇ ಆವೃತ್ತಿಯ 9ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ತಂಡವು 8 ವಿಕೆಟ್ ನಷ್ಟಕ್ಕೆ 193 ರನ್ ಚಚ್ಚಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 8 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿ ಸೋಲು ಒಪ್ಪಿಕೊಂಡಿತು. ಮುಂಬೈ ಪರ ನಾಯಕ ರೋಹಿತ್ ಶರ್ಮಾ 54 ರನ್, ತಿಲಕ್ ವರ್ಮಾ 61 ರನ್ ಗಳಿಸಿದರು.
ಇದಕ್ಕೂ ಮುನ್ನ ರಾಜಸ್ಥಾನ್ ಪರ ಜೋಸ್ ಬಟ್ಲರ್ 100 ರನ್ (68 ಎಸೆತ, 11 ಬೌಂಡರಿ, 5 ಸಿಕ್ಸ್) ಚಚ್ಚಿ ಮಿಂಚಿದ್ದರೆ, ಶಿಮ್ರಾನ್ ಹೆಟ್ಮೇಯರ್ 35 ರನ್, ನಾಯಕ ಸಂಜು ಸ್ಯಾಮ್ಸನ್ 30 ರನ್ ಗಳಿಸಿದ್ದರು.
PublicNext
02/04/2022 07:35 pm