ಮುಂಬೈ: ಲಿಯಾಮ್ ಲಿವಿಂಗ್‌ಸ್ಟೋನ್ ಅಬ್ಬರದ ಅರ್ಧಶತಕ ಸಹಾಯದಿಂದ ಪಂಜಾಬ್ ಕಿಂಗ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್‌ಗೆ 181 ರನ್‌ಗಳ ಗುರಿ ನೀಡಿದೆ.
ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2022ರ 11ನೇ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡವು 8 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿತು.
ಪಂಜಾಬ್ ಪರ ಲಿಯಾಮ್ ಲಿವಿಂಗ್‌ಸ್ಟೋನ್ 60 ರನ್ (32 ಎಸೆತ, 5 ಬೌಂಡರಿ, 5 ಸಿಕ್ಸ್), ಶಿಖರ್ ಧವನ್ (33 ರನ್) ಗಳಿಸಿದರು. ನಾಯಕ ಮಯಾಂಕ್ ಅಗರ್ವಾಲ್ (4 ರನ್), ಭಾನುಕ ರಾಜಪಕ್ಸ (9 ರನ್), ಶಾರುಖ್ ಖಾನ್ (6 ರನ್) ಬ್ಯಾಟಿಂಗ್ ವೈಫಲ್ಯ ತೋರಿದರು.
PublicNext
03/04/2022 09:38 pm