ಮುಂಬೈ: ಲಕ್ನೋ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಮುಂಬೈನ ಡಿ.ವೈ. ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 2022ರ 12ನೇ ಪಂದ್ಯವು ಲಕ್ನೋ ಹಾಗೂ ಹೈದರಾಬಾದ್ ಎರಡೂ ತಂಡಗಳಿಗೂ ಮಹತ್ವದ್ದಾಗಿದೆ. ಲಕ್ನೋ ತಂಡವು ಈಗಾಗಲೇ ಆಡಿದ 2 ಪಂದ್ಯಗಳಲ್ಲಿ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇನ್ನು ಹೈದರಾಬಾದ್ ಆಡಿಗ ಮೊದಲ ಪಂದ್ಯದಲ್ಲೇ ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ ಕೊನೆಯ (10ನೇ) ಸ್ಥಾನದಲ್ಲಿದೆ.
PublicNext
04/04/2022 07:12 pm