ಮುಂಬೈ: ಭಾರಿ ರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 12 ರನ್‌ಗಳಿಂದ ಗೆದ್ದು ಬೀಗಿದೆ.
ಮುಂಬೈನ ಡಿ.ವೈ. ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2022ರ 12ನೇ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡವು 7 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತ್ತು.
170 ರನ್‌ಗಳ ಗುರಿ ಬೆನ್ನಟ್ಟಿದ ಹೈದರಾಬಾದ್ ತಂಡವು 9 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿ ಸೋಲು ಒಪ್ಪಿಕೊಂಡಿತು.
ಹೈದರಾಬಾದ್ ತಂಡದ ಪರ ರಾಹುಲ್ ತ್ರಿಪಾಠಿ 44 ರನ್, ನಿಕೋಲಸ್ ಪೂರನ್ 34 ರನ್ ಗಳಿಸಿದರು. ಈ ಪಂದ್ಯದಲ್ಲೂ ನಾಯಕ ಕೇನ್ ವಿಲಿಯಮ್ಸನ್ 16 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು.
ಲಕ್ನೋ ಪರ ನಾಯಕ ಕೆ.ಎಲ್.ರಾಹುಲ್ 68 ರನ್ ಹಾಗೂ ದೀಪಕ್ ಹೂಡಾ 51 ರನ್ ಗಳಿಸಿ ಮಿಂಚಿದರೆ, ಮನೀಷ್ ಪಾಂಡೆ (11 ರನ್) ಮತ್ತೆ ಬ್ಯಾಟಿಂಗ್ ವೈಫಲ್ಯ ತೋರಿದ್ದರು. ಇನ್ನು ಹೈದರಾಬಾದ್ ಪರ ರೊಮೆರೊ ಶೆಪರ್ಡ್, ವಾಷಿಂಗ್ಟನ್ ಸುಂದರ್ ಹಾಗೂ ಟಿ ನಟರಾಜನ್ ತಲಾ ಎರಡು ವಿಕೆಟ್ ಪಡೆದುಕೊಂಡಿದ್ದರು.
PublicNext
04/04/2022 11:27 pm