ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15ರ ಭಾಗವಾಗಿ ಇಂದು ನಡೆಯಲಿರುವ 13ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎದುರಿಸಲಿದೆ. ಸತತ ಎರಡು ಪಂದ್ಯಗಳನ್ನು ಗೆದ್ದು ರಾಜಸ್ಥಾನ ಅಗ್ರ ಸ್ಥಾನದಲ್ಲಿದೆ. ಆರ್‌ಸಿಬಿ ಒಂದು ಪಂದ್ಯ ಗೆದ್ದು ಏಳನೇ ಸ್ಥಾನದಲ್ಲಿದೆ. ಎರಡು ಬಲಿಷ್ಠ ತಂಡಗಳಾಗಿದ್ದು, ಯಾರು ಗೆಲ್ಲುತ್ತಾರೆ? ಎಂದು ಹೇಳೋದು ಕಷ್ಟಸಾಧ್ಯ.
ಗ್ಲೆನ್ ಮ್ಯಾಕ್ಸ್‌ವೆಲ್ ಬೆಂಗಳೂರು ತಂಡ ಬಂದು ಸೇರಿಕೊಂಡಿದ್ದಾರೆ. ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್, ಮಾಜಿ ನಾಯಕ ವಿರಾಟ್ ಕೊಹ್ಲಿ, ದಿನೇಶ್ ಕಾರ್ತೀಕ್ ಫಾರ್ಮ್ನಲ್ಲಿದ್ದಾರೆ. ಮ್ಯಾಕ್ಸ್‌ವೆಲ್ ಬಂದಿರೋ ಕಾರಣ ಶೆರ್ಫೇನ್ ರುದರ್‌ಫೋರ್ಡ್ ಬೆಂಚ್ ಕಾಯಬೇಕಾಗಬಹುದು.
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಾಸಿ ವಾನ್ ಡೆರ್ ಡುಸ್ಸೆನ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ನವದೀಪ್ ಸೈನಿ
ಆರ್‌ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಅನುಜ್ ರಾವತ್, ದಿನೇಶ್ ಕಾರ್ತಿಕ್ (WK), ಶೆರ್ಫೇನ್ ರುದರ್‌ಫೋರ್ಡ್ / ಗ್ಲೆನ್ ಮ್ಯಾಕ್ಸ್‌ವೆಲ್, ಡೇವಿಡ್ ವಿಲ್ಲಿ, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
PublicNext
05/04/2022 07:04 am