ಮುಂಬೈ : ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿ ಯಲ್ಲಿ ಇಂದು ಲಖನೌ ಸೂಪರ್ ಜಯಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೆಣಸಾಟ ನಡೆಸಿ ಕೊನೆಗೆ ಕೆಎಲ್ ರಾಹುಲ್ ನೇತೃತ್ವದ ಲಖನೌ ಟೀಮ್ ಗೆಲುವಿನ ನಗೆ ಬೀರಿದೆ.
ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟ್ಸ್ ಮನ್ ಕ್ವಿಂಟನ್ ಡಿ ಕಾಕ್ (80ರನ್, 52 ಎಸೆತ, 9 ಬೌಂಡರಿ, 2 ಸಿಕ್ಸರ್) ಐಪಿಎಲ್ ನಲ್ಲಿ ಬಾರಿಸಿದ 18ನೇ ಅರ್ಧಶತಕದ ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ.
ಸೋಲಿನಿಂದಿಗೆ ಹಾಲಿ ಅವೃತ್ತಿಯ ಅಭಿಯಾನ ಆರಂಭಿಸಿದ ಲಖನೌ ಸೂಪರ್ ಜೈಂಟ್ಸ್ 6 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಕಂಡಿದೆ.
PublicNext
07/04/2022 11:46 pm