ಮುಂಬೈ: ಲಿಯಾಮ್ ಲಿವಿಂಗ್‌ಸ್ಟೋನ್ ಅರ್ಧಶತಕ ಹಾಗೂ ಶಿಖರ್ ಧವನ್ ಸಮಯೋಚಿತ ಬ್ಯಾಟಿಂಗ್ ಸಹಾಯದಿಂದ ಪಂಜಾಬ್ ಕಿಂಗ್ಸ್ ತಂಡವು ಗುಜರಾತ್ ಟೈಟಲ್ಸ್‌ಗೆ 190 ರನ್‌ಗಳ ಗುರಿ ನೀಡಿದೆ.
ಐಪಿಎಲ್ 2022ರ ಭಾಗವಾಗಿ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡವು 9 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿದೆ.
ಪಂಜಾಬ್ ಪರ ಲಿಯಾಮ್ ಲಿವಿಂಗ್‌ಸ್ಟೋನ್ ಅಬ್ಬರಿಸಿದರು. ಅವರು 27 ಎಸೆತಗಳಲ್ಲಿ 7 ಬೌಂಡರಿ, 4 ಸಿಕ್ಸ್ ಸೇರಿ 64 ರನ್ ಚಚ್ಚಿದರು. ಇನ್ನು ಶಿಖರ್ ಧವನ್ 35 ರನ್, ಜಿತೇಶ್ ಶರ್ಮಾ 23 ರನ್, ರಾಹುಲ್ ಚಾಹರ್ 22 ಬಾರಿಸಿದರು. ಇಂದಿನ ಪಂದ್ಯದಲ್ಲೂ ಪಂಜಾಬ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ವೈಫಲ್ಯ ತೋರಿದರು. ಅವರು 9 ಎಸೆತಗಳಲ್ಲಿ ಕೇವಲ 5 ರನ್ ಗಳಿಸಿದರು.
ಗುಜರಾತ್ ಪರ ರಶಿದ್ ಖಾನ್ 3 ವಿಕೆಟ್, ದರ್ಶನ್ ನಾಲ್ಕಂಡೆ 2 ವಿಕೆಟ್ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ ತಲಾ ಒಂದು ವಿಕೆಟ್ ಪಡೆದರು.
PublicNext
08/04/2022 09:28 pm