ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2022: ಶುಭ್ಮನ್ ಗಿಲ್ ಶತಕ ಮಿಸ್- ಕೊನೆಯ ಎಸೆತದಲ್ಲಿ ಗೆದ್ದ ಗುಜರಾತ್

ಮುಂಬೈ: ಶುಭ್ಮನ್ ಗಿಲ್ ಸ್ಫೋಟಕ ಬ್ಯಾಟಿಂಗ್, ರಶಿದ್ ಖಾನ್ ಉತ್ತಮ ಬೌಲಿಂಗ್ ಪ್ರದರ್ಶನದಿಂದ ಗುಜರಾತ್ ಟೈಟಲ್ಸ್‌ ತಂಡವು ಪಂಜಾಬ್ ಕಿಂಗ್ಸ್‌ ವಿರುದ್ಧ 6 ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿದೆ.

ಐಪಿಎಲ್ 2022ರ ಭಾಗವಾಗಿ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡವು 9 ವಿಕೆಟ್ ನಷ್ಟಕ್ಕೆ 189 ರನ್‌ ಗಳಿಸಿತ್ತು.

ಬಳಿಕ ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್‌ ತಂಡವು 4 ವಿಕೆಟ್ ನಷ್ಟಕ್ಕೆ 190 ರನ್‌ ಚಚ್ಚಿ ಗೆದ್ದು ಬೀಗಿದೆ. ತಂಡದ ಪರ ಶುಭ್ಮನ್ ಗಿಲ್ 59 ಎಸೆತ, 11 ಬೌಂಡರಿ, 1 ಸಿಕ್ಸ್‌ ಸಹಿತ 96 ರನ್, ಸಾಯಿ ಸುದರ್ಶನ್ 35 ರನ್ ಗಳಿಸಿದರು.

ಇದಕ್ಕೂ ಮುನ್ನ ಪಂಜಾಬ್ ಪರ ಲಿಯಾಮ್ ಲಿವಿಂಗ್‌ಸ್ಟೋನ್ ಅಬ್ಬರಿಸಿದ್ದರು. ಅವರು 27 ಎಸೆತಗಳಲ್ಲಿ 7 ಬೌಂಡರಿ, 4 ಸಿಕ್ಸ್ ಸೇರಿ 64 ರನ್‌ ಚಚ್ಚಿದ್ದರು. ಇನ್ನು ಶಿಖರ್ ಧವನ್ 35 ರನ್, ಜಿತೇಶ್ ಶರ್ಮಾ 23 ರನ್, ರಾಹುಲ್ ಚಾಹರ್ 22 ಬಾರಿಸಿದ್ದರು. ಇನ್ನು ಗುಜರಾತ್ ಪರ ರಶಿದ್ ಖಾನ್ 3 ವಿಕೆಟ್, ದರ್ಶನ್ ನಾಲ್ಕಂಡೆ 2 ವಿಕೆಟ್ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ ತಲಾ ಒಂದು ವಿಕೆಟ್ ಪಡೆದಿದ್ದರು.

Edited By : Vijay Kumar
PublicNext

PublicNext

08/04/2022 11:37 pm

Cinque Terre

40.21 K

Cinque Terre

0