ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಐಪಿಎಲ್ 2022ರ ಭಾಗವಾಗಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯವು ಚೆನ್ನೈ ಹಾಗೂ ಹೈದರಾಬಾದ್ ತಂಡಗಳಿಗೆ ಮಹತ್ವದ್ದಾಗಿದೆ. ಈ ಬಾರಿಯ ಆವೃತ್ತಿಯಲ್ಲಿ ಚೆನ್ನೈ ತಂಡವು ಆಡಿರುವ ಮೂರು ಪಂದ್ಯಗಳಲ್ಲಿಯೂ ಸೋಲು ಕಂಡರೆ, ಹೈದರಾಬಾದ್ ತಂದವು ಆಡಿದ ಎರಡೂ ಪಂದ್ಯಗಳಲ್ಲಿ ಸೋತಿದೆ. ಹೀಗಾಗಿ ಉಭಯ ತಂಡಗಳು ಗೆಲುವಿನ ಖಾತೆ ತೆರೆಯುವ ತವಕದಲ್ಲಿವೆ.
PublicNext
09/04/2022 03:18 pm