ಮುಂಬೈ: ವಾಷಿಂಗ್ಟನ್ ಸುಂದರ್, ಟಿ. ನಟರಾಜನ್ ಬೌಲಿಂಗ್ ದಾಳಿಗೆ ತತ್ತರಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ಗೆ 155 ರನ್ಗಳ ಗುರಿ ನೀಡಿದೆ.
ಐಪಿಎಲ್ 2022ರ ಭಾಗವಾಗಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿದೆ.
ಚೆನ್ನೈ ಪರ ಮೋಯಿನ್ ಅಲಿ 35 ಎಸೆತಗಳಲ್ಲಿ 48 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಇನ್ನು ಅಂಬಾಟಿ ರಾಯ್ಡು 27 ರನ್ ಹಾಗೂ ನಾಯಕ ರವೀಂದ್ರ ಜಡೇಜಾ 23 ರನ್ ಗಳಿಸಿದರು. ಉಳಿದಂತೆ ಪ್ರಮುಖ ಆಟಗಾರರು 20 ರನ್ಗಳ ಗಡಿದಾಟುವಲ್ಲಿ ವಿಫಲರಾದರು. ಇನ್ನು ಹೈದರಾಬಾದ್ ಪರ ವಾಷಿಂಗ್ಟನ್ ಸುಂದರ್, ಟಿ. ನಟರಾಜನ್ ತಲಾ 2 ವಿಕೆಟ್ ಪಡೆದು ಮಿಂಚಿದರೆ, ಭುನವೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್ ಹಾಗೂ ಐಡೆನ್ ಮಾರ್ಕ್ರಾಮ್ ತಲಾ ಒಂದು ವಿಕೆಟ್ ಉರುಳಿಸಿದರು.
PublicNext
09/04/2022 05:33 pm