ಮುಂಬೈ: ಅಭಿಷೇಕ್ ಶರ್ಮಾ ಅಬ್ಬರದ ಅರ್ಧಶತಕ, ನಾಯಕ ಕೇನ್ ವಿಲಿಯಮ್ಸನ್ ಹಾಗೂ ರಾಹುಲ್ ತ್ರಿಪಾಠಿ ಸಮಯೋಚಿತ ಬ್ಯಾಟಿಂಗ್ ಸಹಾಯದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 8 ವಿಕೆಟ್‌ಗಳಿಂದ ಗೆದ್ದು ಬೀಗಿದೆ.
ಐಪಿಎಲ್ 2022ರ ಭಾಗವಾಗಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ತಂಡವು 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತ್ತು.
155 ರನ್‌ಗಳ ಟಾರ್ಗೆಟ್ ಬೆನ್ನತ್ತಿದ ಹೈದರಾಬಾದ್ ತಂಡವು 14 ಎಸೆತಗಳು ಬಾಕಿ ಇರುವಂತೆ 2 ವಿಕೆಟ್ ನಷ್ಟಕ್ಕೆ 155 ರನ್ ಚಚ್ಚಿ ಗೆದ್ದು ಬೀಗಿದೆ. ಹೈದರಾಬಾದ್ ಪರ ಅಭಿಷೇಕ್ ಶರ್ಮಾ 75 ರನ್ (50 ಎಸೆತ), ನಾಯಕ ಕೇನ್ ವಿಲಿಯಮ್ಸನ್ 32 ರನ್ ಹಾಗೂ ರಾಹುಲ್ ತ್ರಿಪಾಠಿ ಅಜೇಯ 39 ರನ್ ಗಳಿಸಿದರು.
ಇದಕ್ಕೂ ಮುನ್ನ ಚೆನ್ನೈ ಪರ ಮೋಯಿನ್ ಅಲಿ 35 ಎಸೆತಗಳಲ್ಲಿ 48 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು. ಇನ್ನು ಅಂಬಾಟಿ ರಾಯ್ಡು 27 ರನ್ ಹಾಗೂ ನಾಯಕ ರವೀಂದ್ರ ಜಡೇಜಾ 23 ರನ್ ಗಳಿಸಿದ್ದರು. ಉಳಿದಂತೆ ಪ್ರಮುಖ ಆಟಗಾರರು 20 ರನ್‌ಗಳ ಗಡಿದಾಟುವಲ್ಲಿ ವಿಫಲರಾಗಿದ್ದರು. ಇನ್ನು ಹೈದರಾಬಾದ್ ಪರ ವಾಷಿಂಗ್ಟನ್ ಸುಂದರ್, ಟಿ. ನಟರಾಜನ್ ತಲಾ 2 ವಿಕೆಟ್ ಪಡೆದು ಮಿಂಚಿದ್ದರೆ, ಭುನವೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್ ಹಾಗೂ ಐಡೆನ್ ಮಾರ್ಕ್ರಾಮ್ ತಲಾ ಒಂದು ವಿಕೆಟ್ ಉರುಳಿಸಿದ್ದರು.
PublicNext
09/04/2022 07:29 pm