ಮುಂಬೈ: ನಾಯಕ ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಆಟಗಾರರ ಬ್ಯಾಟಿಂಗ್ ವೈಫಲ್ಯದ ನಡುವೆ ಸೂರ್ಯಕುಮಾರ್ ಯಾದವ್ ಸಮಯೋಚಿತ ಬ್ಯಾಟಿಂಗ್ ತೋರಿದ ಪರಿಣಾಮ ಮುಂಬೈ ಇಂಡಿಯನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 152 ರನ್‌ಗಳ ಗುರಿ ನೀಡಿದೆ.
ಐಪಿಎಲ್ 2022ರ ಭಾಗವಾಗಿ ಪುಣೆಯಲ್ಲಿ ನಡೆಯುತ್ತಿರುವ 18ನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸ್ಸಿಸ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 6 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿದೆ. ಮುಂಬೈ ಪರ ಸೂರ್ಯಕುಮಾರ್ ಯಾದವ್ 37 ಎಸೆತಗಳಲ್ಲಿ 5 ಬೌಂಡರಿ, 6 ಸಿಕ್ಸ್ ಸೇರಿ 68 ರನ್ ಚಚ್ಚಿದರೆ, ನಾಯಕ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ತಲಾ 26 ರನ್ ಗಳಿಸಿದರು.
ಇನ್ನು ಆರ್‌ಸಿಬಿ ಪರ ವನಿಂದು ಹಸರಂಗ ಡಿ ಸಿಲ್ವ ಹಾಗೂ ಹರ್ಷಲ್ ಪಟೇಲ್ ತಲಾ 2 ವಿಕೆಟ್ ಉರುಳಿಸಿದರೆ, ಅಕ್ಷ ದೀಪ್ 1 ವಿಕೆಟ್ ಪಡೆಯುವ ಜೊತೆಗೆ ರನ್ ಮೇಲೆ ಹಿಡಿತ ಸಾಧಿಸಿದರು. ಇಂದಿನ ಪಂದ್ಯದಲ್ಲೂ ಮೊಹಮ್ಮದ್ ಸಿರಾಜ್ ದುಬಾರಿಯಾದರು. ಅವರು 4 ಓವರ್ ಬೌಲಿಂಗ್ ಮಾಡಿ ಯಾವುದೇ ವಿಕೆಟ್ ಪಡೆಯದೆ 51 ರನ್ ನೀಡಿದರು.
PublicNext
09/04/2022 09:30 pm