ಮುಂಬೈ: ಉತ್ತಮ ಬ್ಯಾಟಿಂಗ್ ಹಾಗೂ ಬೌಲಿಂಗ್ ಸಹಾಯದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 44 ರನ್‌ಗಳಿಂದ ಗೆದ್ದು ಬೀಗಿದೆ.
ಐಪಿಎಲ್ 2022ರ ಟೂರ್ನಿ ಭಾಗವಾಗಿ ನಡೆದ 19ನೇ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು.ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡವು 5 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿತ್ತು.
216 ರನ್‌ಗಳ ಟಾರ್ಗೆಟ್ ಬೆನ್ನತ್ತಿದ ಕೆಕೆಆರ್ 19.4 ಓವರ್‌ಗಳಲ್ಲಿ ಎಲ್ಲಾ 10 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿ ಸೋಲು ಒಪ್ಪಿಕೊಂಡಿತು.
PublicNext
10/04/2022 07:37 pm