ಮುಂಬೈ: ಹೊಸ ತಂಡವಾದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 20ನೇ ಪಂದ್ಯದಲ್ಲಿ ಸೆಣಸಾಡಿವೆ. ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 3 ರನ್‌ಗಳ ಜಯ ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರರನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ಪರ ಜೋಸ್ ಬಟ್ಲರ್ ಮತ್ತು ದೇವದತ್ ಪಡಿಕ್ಕಲ್ ಆರಂಭಿಕ ಆಟಗಾರರಾಗಿ ಕಣಕ್ಕಿಳಿದರು. ಜೋಸ್ ಬಟ್ಲರ್ 11 ಎಸೆತಗಳಲ್ಲಿ 13 ರನ್ ಗಳಿಸಿ ಔಟ್ ಆದರೆ, ದೇವದತ್ ಪಡಿಕ್ಕಲ್ 29 ಎಸೆತಗಳಲ್ಲಿ 29 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನುಳಿದಂತೆ ನಾಯಕ ಸಂಜು ಸ್ಯಾಮ್ಸನ್ 12 ಎಸೆತಗಳಲ್ಲಿ 13 ರನ್ ಬಾರಿಸಿದರೆ, ವಾನ್ ಡರ್ ಡುಸೆನ್ 4 ರನ್, ರವಿಚಂದ್ರನ್ ಅಶ್ವಿನ್ 28, ರಿಯಾನ್ ಪರಾಗ್ 8 ರನ್, ಶಿಮ್ರಾನ್ ಹೆಟ್ಮಾಯೆರ್ ಅಜೇಯ 59 ರನ್ ಮತ್ತು ಟ್ರೆಂಟ್ ಬೌಲ್ಟ್ ಅಜೇಯ 2 ರನ್ ಕಲೆ ಹಾಕಿದರು. ಹೀಗೆ ಶಿಮ್ರಾನ್ ಹೆಟ್ಮಾಯೆರ್ ಸ್ಫೋಟಕ ಆಟದ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 165 ರನ್ ಕಲೆಹಾಕಿದ ರಾಜಸ್ಥಾನ್ ರಾಯಲ್ಸ್ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 166 ರನ್‌ಗಳ ಗುರಿ ನೀಡಿತ್ತು.
PublicNext
11/04/2022 12:13 am