ಮುಂಬೈ: ಗುಜರಾತ್ ಟೈಟಲ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಸರ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್‌ನ 15ನೇ ಆವೃತ್ತಿಯ ಭಾಗವಾಗಿ ನಡೆಯುತ್ತಿರುವ 21ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ. ಬಲಿಷ್ಠ ಗುಜರಾತ್ ತಂಡವು ಈಗಾಗಲೇ ಆಡಿರುವ ಮೂರು ಪಂದ್ಯಗಳಲ್ಲೂ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಇನ್ನು ಹೈದರಾಬಾದ್ ತಂಡವು ಈವರೆಗೂ 3 ಪಂದ್ಯಗಳನ್ನು ಆಡಿದ್ದು, ಒಂದರಲ್ಲಿ ಮಾತ್ರ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
PublicNext
11/04/2022 07:13 pm