ಮುಂಬೈ: ನಾಯಕ ಹಾರ್ದಿಕ್ ಪಾಂಡ್ಯ ಅರ್ಧಶತಕದ ಸಹಾಯದಿಂದ ಗುಜರಾತ್ ಟೈಟಲ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 163 ರನ್‌ಗಳ ಗುರಿ ನೀಡಿದೆ.
ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್‌ನ 15ನೇ ಆವೃತ್ತಿಯ ಭಾಗವಾಗಿ ನಡೆಯುತ್ತಿರುವ 21ನೇ ಪಂದ್ಯದಲ್ಲಿ ಟಾಸ್ ಗೆದ್ದ ಸರ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 7 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿದೆ.
ಗುಜರಾತ್ ಪರ ಹಾರ್ದಿಕ್ ಪಾಂಡ್ಯ 50 ರನ್, ಅಭಿನವ್ ಮನೋಹರ್ 35 ರನ್ ಗಳಿಸಿದರು. ಇನ್ನು ಹೈದರಾಬಾದ್ ಪರ ಅನುಭವಿ ಬೌಲರ್ ಭುವನೇಶ್ವರ್ ಕುಮಾರ್, ಯುವ ಬೌಲರ್ ಟಿ. ನಟರಾಜನ್ ತಲಾ 2 ವಿಕೆಟ್ ಉರುಳಿಸಿದರೆ, ಮಾರ್ಕೊ ಜಾನ್ಸೆನ್ ಹಾಗೂ ಉಮ್ರಾನ್ ಮಲಿಕ್ ತಲಾ ಒಂದು ವಿಕೆಟ್ ಪಡೆದು ತಂಡಕ್ಕೆ ಆಸರೆಯಾದರು.
PublicNext
11/04/2022 09:26 pm