ಮುಂಬೈ: ಭಾರಿ ರೋಚಕ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 8 ವಿಕೆಟ್ಗಳಿಂದ ಗೆದ್ದು ಬೀಗಿದೆ.
ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್ನ 15ನೇ ಆವೃತ್ತಿಯ ಭಾಗವಾಗಿ ನಡೆದ 21ನೇ ಪಂದ್ಯದಲ್ಲಿ ಟಾಸ್ ಗೆದ್ದ ಸರ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 7 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡವು 5 ಎಸೆತಗಳು ಬಾಕಿ ಇರುವಂತೆ 2 ವಿಕೆಟ್ ನಷ್ಟಕ್ಕೆ 168 ರನ್ ಚಚ್ಚಿ ಗೆದ್ದು ಬೀಗಿದೆ.
ಹೈದರಾಬಾದ್ ಪರ ನಾಯಕ ಕೇನ್ ವಿಲಿಯಮ್ಸನ್ 57 ರನ್, ಅಭಿಷೇಕ ಶರ್ಮಾ 42 ರನ್, ನಿಕೋಲಸ್ ಪೂರನ್ 34 ರನ್ ಬಾರಿಸಿದರು.
ಇದಕ್ಕೂ ಮುನ್ನ ಗುಜರಾತ್ ಪರ ಹಾರ್ದಿಕ್ ಪಾಂಡ್ಯ 50 ರನ್, ಅಭಿನವ್ ಮನೋಹರ್ 35 ರನ್ ಗಳಿಸಿದ್ದರು. ಇನ್ನು ಹೈದರಾಬಾದ್ ಪರ ಅನುಭವಿ ಬೌಲರ್ ಭುವನೇಶ್ವರ್ ಕುಮಾರ್, ಯುವ ಬೌಲರ್ ಟಿ. ನಟರಾಜನ್ ತಲಾ 2 ವಿಕೆಟ್ ಉರುಳಿಸಿದರೆ, ಮಾರ್ಕೊ ಜಾನ್ಸೆನ್ ಹಾಗೂ ಉಮ್ರಾನ್ ಮಲಿಕ್ ತಲಾ ಒಂದು ವಿಕೆಟ್ ಪಡೆದು ತಂಡಕ್ಕೆ ಆಸರೆಯಾಗಿದ್ದರು.
PublicNext
11/04/2022 11:21 pm