ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ 15ನೇ ಟೂರ್ನಿಯ ಭಾಗವಾಗಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಸೆಣಸಾಟ ನಡೆಯಲಿದೆ.
ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಚೆನ್ನೈ ಹಾಗೂ ಆರ್‌ಸಿಬಿ ಪಂದ್ಯ ನಡೆಯುವ ಪಂದ್ಯವು ರೋಚಕವಾಗಿರಲಿದೆ. ಈ ಟೂರ್ನಿಯಲ್ಲಿ ಆರ್‌ಸಿಬಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಇನ್ನೊಂದೆಡೆ ಹಾಲಿ ಚಾಂಪಿಯನ್ ಚೆನ್ನೈ ತಂಡವು ಸತತ ನಾಲ್ಕು ಸೋಲು ಕಂಡಿದೆ. ಹೀಗಾಗಿ ಗೆಲುವಿನ ಖಾತೆ ತೆರೆಯಲು ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ತಂಡವು ಭರ್ಜರಿ ಸಿದ್ಧತೆ ನಡೆಸಿದೆ.
ಇದುವರೆಗೂ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ 28 ಪಂದ್ಯಗಳು ನಡೆದಿವೆ. ಈ ಪೈಕಿ ಚೆನ್ನೈ 18 ಪಂದ್ಯಗಳಲ್ಲಿ ಗೆದ್ದರೆ, ಬೆಂಗಳೂರು 9 ಪಂದ್ಯಗಳಲ್ಲಿ ಗೆದ್ದಿದೆ. ಅಲ್ಲದೇ ಒಂದು ಪಂದ್ಯ ಮಾತ್ರ ಡ್ರಾನಲ್ಲಿ ಅಂತ್ಯಗೊಂಡಿದೆ.
ಕಳೆದ 5 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 4 ಪಂದ್ಯಗಳಲ್ಲಿ ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 1 ಪಂದ್ಯದಲ್ಲಿ ಗೆದ್ದಿದೆ. ಕೊನೆ 5 ಐಪಿಎಲ್ ಪಂದ್ಯಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಹೆಚ್ಚು ಬಾರಿ ಗೆದ್ದಿದೆ.
PublicNext
12/04/2022 07:30 am