ಪುಣೆ : 15ನೇ ಆವೃತ್ತಿಯ ಐಪಿಎಲ್ ನಲ್ಲಿ ಗೆಲುವಿನ ಖಾತೆ ತೆರೆಯಲು ಹೆಣಗಾಡುತ್ತಿರುವ ಮುಂಬೈ ಇಂಡಿಯನ್ಸ್ ಇಂದು ಪಂಜಾಬ್ ಕಿಂಗ್ಸ್ ಸವಾಲನ್ನು ಎದುರಿಸಲಿದೆ. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಈವರೆಗೆ ಆಡಿದ ಎಲ್ಲಾ 4 ಪಂದ್ಯಗಳಲ್ಲಿ ಪರಾಭವಗೊಂಡಿದ್ದು, ಈ ಪಂದ್ಯದಲ್ಲೂ ಸೋತರೆ ಪ್ಲೇ-ಆಫ್ ಹಾದಿ ಮತ್ತಷ್ಟು ಕಠಿಣಗೊಳ್ಳಲಿದೆ.
ಇನ್ನೊಂದೆಡೆ ಪಂಜಾಬ್ ಕಿಂಗ್ಸ್ ಅಸ್ಥಿರ ಪ್ರದರ್ಶನ ತೋರುತ್ತಿದ್ದು, ಆಡಿರುವ 4 ಪಂದ್ಯಗಲ್ಲಿ 2 ರಲ್ಲಿ ಗೆಲುವು ಸಾಧಿಸಿದೆ.
ಸಂಭವನೀಯ ಆಟಗಾರರ ಪಟ್ಟಿ
ಮುಂಬೈ: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರನ್ ಪೊಲ್ಲಾರ್ಡ್, ಡೇನಿಯಲ್ ಸ್ಯಾಮ್ಸ್, ಟೈಮಲ್ ಮಿಲ್ಸ್, ಮುರುಗನ್ ಅಶ್ವಿನ್, ಜಯದೇವ್ ಉನಾದ್ಕತ್, ಜಸ್ಪ್ರೀತ್ ಬುಮ್ರಾ.
ಪಂಜಾಬ್: ಶಿಖರ್ ಧವನ್, ಮಯಾಂಕ್ ಅಗರ್ವಾಲ್ (ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ಜಾನಿ ಬೇರ್ಸ್ಟೋವ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಓಡೆನ್ ಸ್ಮಿತ್, ಹಪ್ರೀರ್ತ್ ಬ್ರಾರ್, ವೈಭವ್ ಅರೋರಾ, ರಾಹುಲ್ ಚಹರ್, ಅಶ್ರ್ದೀಪ್ ಸಿಂಗ್.
ಸ್ಥಳ: ಪುಣೆ, ಎಂಸಿಎ ಕ್ರೀಡಾಂಗಣ
ಪಂದ್ಯ: ಸಂಜೆ 7.30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
PublicNext
13/04/2022 09:53 am