ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 23 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟರ್ ದಿನೇಶ್ ಕಾರ್ತಿಕ್ ಭರ್ಜರಿ ಬ್ಯಾಟಿಂಗ್ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ಯುತ್ತಿದ್ದರು. ಆದರೆ ಆರ್‌ಸಿಬಿ ಇನ್ನಿಂಗ್ಸ್‌ನ 17 ಓವರ್‌ನ ಮೊದಲ ಎಸೆತದಲ್ಲಿ ದಿನೇಶ್ ಕಾರ್ತಿಕ್ ಸಿಕ್ಸ್ ಸಿಡಿಸಲು ಯತ್ನಿಸಿದರು. ಆದರೆ ಚೆಂಡು ನೇರವಾಗಿ ಬೌಂಡರಿ ಲೈನ್‌ನಲ್ಲಿ ನಿಂತಿದ್ದ ರವೀಂದ್ರ ಜಡೇಜಾ ಕೈ ಸೇರಿತು. ಇದರೊಂದಿಗೆ ದಿನೇಶ್ ಕಾರ್ತಿಕ್ (34 ರನ್, 14 ಎಸೆತ) ವಿಕೆಟ್ ಒಪ್ಪಿಸಿ ಪೆವಿಲಿಯನ್ ಕಡೆಗೆ ನಡೆದರು.
ಇತ್ತ ಕ್ಯಾಚ್ ಪಡೆದು ರವೀಂದ್ರ ಜಡೇಜಾ ಸಂಭ್ರಮಿಸಿದ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ತಮ್ಮದೆ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
PublicNext
13/04/2022 11:36 am