ಮುಂಬೈ: ನಾಯಕ ಮಯಾಂಕ್ ಅರ್ವಾಲ್ ಹಾಗೂ ಶಿಖರ್ ಧವನ್ ಅರ್ಧಶತಕದ ಸಹಾಯದಿಂದ ಪಂಜಾಬ್ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡಕ್ಕೆ 199 ರನ್‌ಗಳ ಗುರಿ ನೀಡಿದೆ.
ಪುಣೆ ಕ್ರೀಡಾಂಗಣದಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 23ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡವು 5 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದೆ.
ಪಂಜಾಬ್ ಪರ ನಾಯಕ ಮಯಾಂಕ್ ಅಗರ್ವಾಲ್ 52 ರನ್, ಶಿಖರ್ ಧವನ್ 70 ರನ್ ಹಾಗೂ ಜಿತೇಶ್ ಶರ್ಮಾ ಅಜೇಯ 30 ರನ್ ಬಾರಿಸಿದರು.
PublicNext
13/04/2022 09:23 pm