ಮುಂಬೈ: ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 12 ರನ್‌ಗಳಿಂದ ರೋಚಕ ಗೆಲುವು ಸಾಧಿಸಿದೆ.
ಪುಣೆ ಕ್ರೀಡಾಂಗಣದಲ್ಲಿ ಐಪಿಎಲ್ 2022ರ ಭಾಗವಾಗಿ ನಡೆದ 23ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡವು 5 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 9 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿ ಸೋಲು ಕಂಡಿದೆ. ಇದರೊಂದಿಗೆ 15ನೇ ಆವೃತ್ತಿಯಲ್ಲಿ ಸತತ ಐದನೇ ಬಾರಿಗೆ ಸೋಲು ಕಂಡಿದೆ.
ಪಂಜಾಬ್ ಪರ ನಾಯಕ ಮಯಾಂಕ್ ಅಗರ್ವಾಲ್ 52 ರನ್, ಶಿಖರ್ ಧವನ್ 70 ರನ್ ಹಾಗೂ ಜಿತೇಶ್ ಶರ್ಮಾ ಅಜೇಯ 30 ರನ್ ಬಾರಿಸಿದ್ದರು.
PublicNext
13/04/2022 11:45 pm