ಇಂಡಿಯನ್ ಪ್ರೀಮಿಯರ್ ಲೀಗ್ 15 ಆವೃತ್ತಿಯಲ್ಲಿ ಇಂದಿನ 24ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಮತ್ತು ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಸೆಣಸಾಡಲಿವೆ. ಮೂರು ಗೆಲುವು ಕೇವಲ ಒಂದು ಸೋಲಿನೊಂದಿಗೆ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಈ ಬಾರಿಯ ಟೂರ್ನಿಯಲ್ಲೇ ಅತ್ಯಂತ ಶ್ರೇಷ್ಠ ಮಟ್ಟದಲ್ಲಿದೆ. ಇತ್ತ ಗುಜರಾತ್ ಟೈಟನ್ಸ್ ಹ್ಯಾಟ್ರಿಕ್ ಗೆಲುವಿನ ನಂತರ ಕಳೆದ ಪಂದ್ಯದಲ್ಲಿ ಮೊದಲ ಸೋಲು ಕಂಡಿತ್ತು.
ಹಾರ್ದಿಕ್ ಪಡೆ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಉಭಯ ತಂಡಗಳಿಗೂ ಈ ಪಂದ್ಯ ಬಹುಮಖ್ಯ ಆಗಿದೆ.
ಉಭಯ ತಂಡಗಳ ಸಂಭಾವ್ಯ ಪಟ್ಟಿ
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ರಾಸಿ ವಾನ್ ಡೆರ್ ಡುಸ್ಸೆನ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಕುಲದೀಪ್ ಸೇನ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ದ್ ಕೃಷ್ಣ, ಯುಜ್ವೇಂದ್ರ ಚಾಹಲ್.
ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ, ರಹಮಾನುಲ್ಲಾ ಗುರ್ಬಾಜ್, ಶುಭಮನ್ ಗಿಲ್, ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ, ಆರ್.ಕೆ. ಸಾಯಿ ಕಿಶೋರ್.
PublicNext
14/04/2022 09:31 am