ಮುಂಬೈ: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಐಪಿಎಲ್ 15ನೇ ಆವೃತ್ತಿಯ ಭಾಗವಾಗಿ ಮುಂಬೈನ ಡಿ.ವೈ. ಪಾಟೀಲ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಬಲಿಷ್ಠ ತಂಡಗಳ ಮಧ್ಯೆ ಫೈಟ್ ನಡೆಯಲಿದೆ. ಈ ಬಾರಿಯ ಟೂರ್ನಿಯಲ್ಲಿ ರಾಜಸ್ಥಾನ್ ತಂಡವು ಆಡಿದ 4 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನು ಗುಜರಾತ್ ತಂಡ ಕೂಡ 4 ಪಂದ್ಯಗಳನ್ನು ಆಡಿದ್ದು, 3ರಲ್ಲಿ ಗೆಲುವು ದಾಖಲಿಸಿದೆ. ಆದರೆ ನೆಟ್ ರನ್ ರೇಟ್ ಕಡಿಮೆ ಇರುವುದರಿಂದ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
PublicNext
14/04/2022 07:11 pm