ಐಪಿಎಲ್ 15 ನೇ ಆವೃತ್ತಿಯ 25 ನೇ ಪಂದ್ಯದಲ್ಲಿಂದು ಸನ್ ರೈಸರ್ಸ್ ಹೈದರಾಬಾದ್ vs ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮುಖಾಮುಖಿಯಾಗಲಿವೆ.
ಐದು ಪಂದ್ಯಗಳಲ್ಲಿ ಕೆಕೆಆರ್ 3ನ್ನು ಗೆದ್ದು ಎರಡನ್ನು ಸೋತಿದೆ. ಸನ್ ರೈಸರ್ಸ್ ಈ ಪಂದ್ಯವನ್ನು ಗೆದ್ದರೆ ಪಾಯಿಂಟ್ ಟೇಬಲ್ ನಲ್ಲಿ 6 ಅಂಕಿಗಳ ಮ್ಯಾಜಿಕ್ ಗ್ರೂಪ್ ಸೇರಲಿದೆ. ಅಷ್ಟೇ ಅಲ್ಲ ಪ್ಲೇ-ಆಫ್ ಫೈಟ್ನಲ್ಲಿ ಕಾಣಿಸಿಕೊಳ್ಳಲಿದೆ. ಎಸ್ಆರ್ಹೆಚ್ ಆಡಿರುವ 4 ಪಂದ್ಯಗಳಲ್ಲಿ 2 ಅನ್ನು ಸೋತು 2 ಅನ್ನು ಗೆದ್ದಿದೆ. ಉಭಯ ತಂಡಗಳಿಗೆ ಈ ಪಂದ್ಯ ಬಹುಮುಖ್ಯ ಆಗಿರುವ ಕಾರಣ ಬ್ರಬೌರ್ನ್ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಮ್ಯಾಚ್ ನಿರೀಕ್ಷಿಸಲಾಗಿದೆ.
ಉಭಯ ತಂಡಗಳ ಸಂಭಾವ್ಯ ಪಟ್ಟಿ
ಕೆಕೆಆರ್: ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ಆಂಡ್ರೆ ರಸೆಲ್, ಸ್ಯಾಮ್ ಆರೋನ್ ಫಿಂಚ್, ಪ್ಯಾಟ್ ಕಮಿನ್ಸ್, ಸುನಿಲ್ ನರೈನ್, ಉಮೇಶ್ ಯಾದವ್, ರಸಿಖ್ ಸಲಾಮ್, ವರುಣ್ ಚಕ್ರವರ್ತಿ.
ಎಸ್ಆರ್ಹೆಚ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್, ಏಡನ್ ಮಾರ್ಕ್ರಾಮ್, ಶಶಾಂಕ್ ಸಿಂಗ್, ಭುವನೇಶ್ವರ್ ಕುಮಾರ್, ಮಾರ್ಕೊ ಯಾನ್ಸನ್, ಉಮ್ರಾನ್ ಮಲಿಕ್, ಟಿ ನಟರಾಜನ್, ಶ್ರೇಯಸ್ ಗೋಪಾಲ್.
PublicNext
15/04/2022 08:49 am