ಮುಂಬೈ: ನಾಯಕ ಕೆ.ಎಲ್.ರಾಹುಲ್ ಅಜೇಯ ಶತಕದ ಸಹಾಯದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್‌ಗೆ 200 ರನ್‌ಗಳ ಸವಾಲು ನೀಡಿದೆ.
ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 26ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡವು 4 ವಿಕೆಟ್ ನಷ್ಟಕ್ಕೆ 199 ರನ್ ಚಚ್ಚಿದೆ.
ಲಕ್ನೋ ಪರ ನಾಯಕ ಕೆ.ಎಲ್.ರಾಹುಲ್ ಅಜೇಯ 103 ರನ್ (60 ಎಸೆತ, 9 ಬೌಂಡರಿ, 5 ಸಿಕ್ಸ್), ಮನೀಶ್ ಪಾಂಡೆ 38 ರನ್ ಹಾಗೂ ಕ್ವಿಂಟನ್ ಡಿ ಕಾಕ್ 24 ರನ್ ಗಳಿಸಿದರು.
PublicNext
16/04/2022 05:31 pm