ಮುಂಬೈ: ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ನಾಯಕ ಕೆಎಲ್ ರಾಹುಲ್ ಇಂದು ಮುಂಬೈ ಇಂಡಿಯನ್ಸ್ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ತಮ್ಮ 100ನೇ ಐಪಿಎಲ್ ಪಂದ್ಯದಲ್ಲಿ ಶತಕ ಸಿಡಿಸಿದ್ದು ವಿಶೇಷವಾಗಿದೆ.
29 ವರ್ಷ ವಯಸ್ಸಿನ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ 57 ಎಸೆತಗಳಲ್ಲಿ ಶತಕ ದಾಖಲಿಸಿದರು. ಇದು ಐಪಿಎಲ್‌ನಲ್ಲಿ ಅವರ ಮೂರನೇ ಶತಕವಾಗಿದೆ. ವಿರಾಟ್ ಕೊಹ್ಲಿ ಮತ್ತು ಸಂಜು ಸ್ಯಾಮ್ಸನ್ ನಂತರ ಐಪಿಎಲ್‌ನಲ್ಲಿ ಮೂರು ಶತಕಗಳನ್ನು ಸಿಡಿಸಿದ ಮೂರನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕನ್ನಡಿಗ ಕೆ.ಎಲ್.ರಾಹುಲ್ ಪಾತ್ರರಾಗಿದ್ದಾರೆ.
PublicNext
16/04/2022 06:11 pm