ಮುಂಬೈ: ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 16 ರನ್‌ಗಳಿಂದ ಗೆದ್ದು ಬೀಗಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆದ 27ನೇ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 5 ವಿಕೆಟ್ ನಷ್ಟಕ್ಕೆ 189 ರನ್ ದಾಖಲಿಸಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡವು 7 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಸೋಲು ಒಪ್ಪಿಕೊಂಡಿದೆ. ತಂಡದ ಪರ ಡೇವಿಡ್ ವಾರ್ನರ್ 66 ರನ್, ನಾಯಕ ರಿಷಭ್ ಪಂತ್ 34 ರನ್ ಗಳಿಸಿದರೆ, ಉಳಿದ ಆಟಗಾರರು ಬ್ಯಾಟಿಂಗ್ ವೈಫಲ್ಯಕ್ಕೆ ಗುರಿಯಾದರು.
ಆರ್‌ಸಿಬಿ ಪರ ಜೋಶ್ ಹ್ಯಾಜಲ್ವುಡ್ 3 ವಿಕೆಟ್ ಉರುಳಿಸಿದರೆ, ಮೊಹಮ್ಮದ್ ಸಿರಾಜ್ 2 ಹಾಗೂ ವನಿಂದು ಹಸರಂಗ ಡಿ ಸಿಲ್ವ ಒಂದು ವಿಕೆಟ್ ಪಡೆದು ತಂಡದ ಗೆಲುವಿಗೆ ಪಾತ್ರವಹಿಸಿದರು.
ಇದಕ್ಕೂ ಮುನ್ನ ಆರ್‌ಸಿಬಿ ಪರ ದಿನೇಶ್ ಕಾರ್ತಿಕ್ ಅಜೇಯ 66 ರನ್, (34 ಎಸೆತ, 5 ಬೌಂಡರಿ, 5 ಸಿಕ್ಸ್), ಗ್ಲೇನ್ ಮಾಕ್ಸ್‌ವೆಲ್ 55 ರನ್ (34 ಎಸೆತ, 7 ಬೌಂಡರಿ, 2 ಸಿಕ್ಸ್), ಶಹಬಾಜ್ ಅಹ್ಮದ್ 32 ರನ್ (21 ಎಸೆತ, 3 ಬೌಂಡರಿ, 1 ಸಿಕ್ಸರ್) ಹಾಗೂ ವಿರಾಟ್ ಕೊಹ್ಲಿ 12 ರನ್ ಗಳಿಸಿದ್ದರು.
PublicNext
16/04/2022 11:37 pm