ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಈ ಬಾರಿಯ ಆವೃತ್ತಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವೈಫಲ್ಯ ಅನುಭವಿಸುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಕೇವಲ 12 ರನ್ ಗಳಿಸಿ ವಿಕೆ ಕಳೆದುಕೊಂಡರು. ಆದರೆ ಪಂದ್ಯಕ್ಕೆ ರೋಚಕ ಟ್ವಿಸ್ಟ್ ನೀಡುವ ಅದ್ಭುತ ಕ್ಯಾಚ್ ಅನ್ನು ಕೊಹ್ಲಿ ಪಡೆದುಕೊಂಡರು.
ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ದಾಖಲಿಸಲು ಕೊನೆಯ 22 ಎಸೆತಗಳಲ್ಲಿ 48 ರನ್ ಗಳಿಸುವ ಅಗತ್ಯವಿತ್ತು. ಈ ವೇಳೆ ರಿಷಭ್ ಪಂತ್ ಬಿರುಸಿನ ಹೊಡೆತಕ್ಕೆ ಮುಂದಾಗಿ ವಿರಾಟ್ ಕೊಹ್ಲಿಗೆ ಕ್ಯಾಚ್ ಒಪ್ಪಿಸಿದರು. ಈ ದೃಶ್ಯವನ್ನು ಕಂಡ ವಿರಾಟ್ ಪತ್ನಿ, ನಟಿ ಅನುಷ್ಕಾ ಶರ್ಮಾ ಫುಲ್ ಖುಷಿಯಾದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
PublicNext
17/04/2022 07:11 am