ಮುಂಬೈ: ಪಂಜಾಬ್ ಕಿಂಗ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದಾರೆ.
ಮುಂಬೈನ ಡಿ.ವೈ.ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 28ನೇ ಪಂದ್ಯದಲ್ಲಿ ಪಂಜಾಬ್ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ. ಉಭಯ ತಂಡಗಳು ಈಗಾಗಲೇ ತಲಾ 5 ಪಂದ್ಯಗಳನ್ನು ಆಡಿದ್ದು, 3ರಲ್ಲಿ ಗೆದ್ದಿವೆ. ಅಂಕಪಟ್ಟಿಯಲ್ಲಿ ಪೊಂಜಾಬ್ 5ನೇ ಸ್ಥಾನದಲ್ಲಿದ್ದರೆ, ಹೈದರಾಬಾದ್ ತಂಡವು 7ನೇ ಸ್ಥಾನದಲ್ಲಿದೆ.
PublicNext
17/04/2022 03:13 pm