ಮುಂಬೈ: ಉತ್ತಮ ಬೌಲಿಂಗ್, ಬ್ಯಾಟಿಂಗ್ ಸಹಾಯದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ 7 ವಿಕೆಟ್‌ಗಳಿಂದ ಗೆದ್ದು ಬೀಗಿದೆ.
ಮುಂಬೈನ ಡಿ.ವೈ.ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆದ 28ನೇ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡವು ಎಲ್ಲಾ 10 ವಿಕೆಟ್ ನಷ್ಟಕ್ಕೆ 151 ರನ್ ದಾಖಲಿಸಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡವು 7 ಎಸೆತಗಳು ಬಾಕಿ ಇರುವಂತೆ 3 ವಿಕೆಟ್ ನಷ್ಟಕ್ಕೆ 19)152 ರನ್ ಚಚ್ಚಿ ಗೆದ್ದು ಬೀಗಿದೆ. ತಂಡದ ಪರ ಆ್ಯಡನ್ ಮಕ್ರಮ್ 41 ರನ್, ರಾಹುಲ್ ತ್ರಿಪಾಠಿ 34 ರನ್ ಹಾಗೂ ಅಭಿಷೇಕ್ ಶರ್ಮಾ 31 ರನ್ ಗಳಿಸಿದರು.
ಇದಕ್ಕೂ ಮುನ್ನ ಪಂಜಾಬ್ ಪರ ಲಿಯಾಮ್ ಲಿವಿಂಗ್‌ಸ್ಟೋನ್ 60 ರನ್ (33 ಎಸೆತ), ಶಾರುಖ್ ಖಾನ್ 26 ರನ್ ಗಳಿಸಿದ್ದರು.
ಇನ್ನು ಹೈದರಾಬಾದ್ ಪರ ಉಮ್ರಾನ್ ಮಲಿಕ್ 4 ವಿಕೆಟ್, ಭುವನೇಶ್ವರ ಕುಮಾರ್ 3 ವಿಕೆಟ್ ಉರುಳಿಸಿದರೆ, ಜಗದೀಶ ಸುಚಿತ್, ಟಿ ನಟರಾಜನ್ ತಲಾ 1 ವಿಕೆಟ್ ಪಡೆದುಕೊಂಡಿದ್ದರು.
PublicNext
17/04/2022 07:37 pm