ಮುಂಬೈ: ಋತುರಾಜ್ ಗಾಯಕ್ವಾಡ್ ಅರ್ಧಶತಕಕ್ಕೆ ಅಂಬಾಟಿ ರಾಯ್ಡು ನೀಡಿದ ಸಾಥ್ ನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಗುಜರಾತ್ ಟೈಟಾನ್ಸ್ ತಂಡಕ್ಕೆ 170 ರನ್‌ಗಳ ಗುರಿ ನೀಡಿದೆ.
ಐಪಿಎಲ್ 2022ರ ಭಾಗವಾಗಿ ಪುಣೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 29ನೇ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು 5 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿದೆ.
ಚೆನ್ನೈ ಪರ ಋತುರಾಜ್ ಗಾಯಕ್ವಾಡ್ 73 ರನ್, ಅಂಬಾಟಿ ರಾಯ್ಡು 46 ರನ್ ಹಾಗೂ ರವೀಂದ್ರ ಜಡೇಜಾ 22 ರನ್ ಗಳಿದರು.
PublicNext
17/04/2022 09:33 pm