ಮುಂಬೈ: ಡೇವಿಡ್ ಮಿಲ್ಲರ ಸ್ಫೋಟಕ ಅರ್ಧಶತಕ, ರಶೀದ್ ಖಾನ್ ಸಮಯೋಚಿತ ಬ್ಯಾಟಿಂಗ್ ಸಹಾಯದಿಂದ ಗುಜರಾತ್ ಟೈಟಾನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 3 ವಿಕೆಟ್ಗಳಿಂದ ಗೆದ್ದು ಬೀಗಿದೆ.
ಐಪಿಎಲ್ 2022ರ ಭಾಗವಾಗಿ ಪುಣೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 29ನೇ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು 5 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 1 ಎಸೆತ ಬಾಕಿ ಇರುವಂತೆ 7 ವಿಕೆಟ್ ನಷ್ಟಕ್ಕೆ 170 ರನ್ ಚಚ್ಚಿ ಗೆಲುವು ಸಾಧಿಸಿದೆ. ಗುಜರಾತ್ ಪರ ಡೇವಿಡ್ ಮಿಲ್ಲರ್ 94 ರನ್ ಹಾಗೂ ರಶೀದ್ ಖಾನ್ 40 ರನ್ ಗಳಿದರು.
ಇದಕ್ಕೂ ಮುನ್ನ ಚೆನ್ನೈ ಪರ ಋತುರಾಜ್ ಗಾಯಕ್ವಾಡ್ 73 ರನ್, ಅಂಬಾಟಿ ರಾಯ್ಡು 46 ರನ್ ಹಾಗೂ ರವೀಂದ್ರ ಜಡೇಜಾ 22 ರನ್ ಗಳಿದ್ದರು.
PublicNext
17/04/2022 11:22 pm