ಮುಂಬೈ: ಟೀಂ ಇಂಡಿಯಾ ಬ್ಯಾಟರ್, ಕನ್ನಡಿಗ ಕೆ.ಎಲ್ ರಾಹುಲ್‌ಗೆ ಇಂದು ಬರ್ತ್‌ಡೇ ಸಂಭ್ರಮ. 30ನೇ ವಸಂತಕ್ಕೆ ಕಾಲಿಟ್ಟ ಕೆ.ಎಲ್ ರಾಹುಲ್‌ಗೆ ಹಾಲಿ ಕ್ರಿಕೆಟಿಗರು, ಮಾಜಿ ಕ್ರಿಕೆಟಿಗರು ಸೇರಿದಂತೆ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರಿದ್ದಾರೆ.
ಕೆ.ಎಲ್ ರಾಹುಲ್ ಗೆಳತಿ ಅಥಿಯಾ ಶೆಟ್ಟಿ ಕೂಡ ಶುಭ ಕೋರಿದ್ದು, 'ನಿನ್ನೊಂದಿಗೆ ಎಲ್ಲಾ ಕಡೆಯಲ್ಲೂ ಇರುತ್ತೇನೆ. ಹ್ಯಾಪಿ ಬರ್ತ್‌ಡೇ' ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಉತ್ತರಿಸಿರುವ ಕೆ.ಎಲ್ ರಾಹುಲ್ ''ಲವ್ ಯೂ'' ಎಂದು ಬ್ಲಾಕ್ ಹಾರ್ಟ್ ಎಮೋಜಿಯನ್ನ ಪೋಸ್ಟ್ ಮಾಡಿದ್ದಾರೆ.
ಐಪಿಎಲ್ 2022ರ ಸೀಸನ್‌ನಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನ ಮುನ್ನಡೆಸುತ್ತಿರುವ ಕೆ.ಎಲ್ ರಾಹುಲ್ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಇತ್ತೀಚೆಗಷ್ಟೇ ತಮ್ಮ 100ನೇ ಐಪಿಎಲ್ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಆಟಗಾರ ಎಂಬ ಸಾಧನೆಯನ್ನ ಮಾಡಿದ್ದಾರೆ.
PublicNext
18/04/2022 04:10 pm