ಮುಂಬೈ: ಜೋಸ್ ಬಟ್ಲರ್ ಸ್ಫೋಟಕ ಶತಕ, ಯಜುವೇಂದ್ರ ಚಾಹಲ್ ಬೌಲಿಂಗ್ ಕಮಾಲ್ ನಿಂದ ರಾಜಸ್ಥಾನ್ ರಾಯಲ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 7 ರನ್‌ಗಳಿಂದ ಗೆದ್ದು ಬೀಗಿದೆ.
ಐಪಿಎಲ್ 2022ರ ಭಾಗವಾಗಿ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆದ 30ನೇ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ತಂಡವು 5 ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಕೆಕೆಆರ್ ಎಲ್ಲಾ 10 ವಿಕೆಟ್ ನಷ್ಟಕ್ಕೆ 210;ರನ್ ಗಳಿಸಿ ಸೋಲು ಒಪ್ಪಿಕೊಂಡಿತು. ಕೆಕೆಆರ್ ಪರ ಶ್ರೇಯಸ್ ಅಯ್ಯರ್ 85 ರನ್ (51 ಎಸೆತ, 7 ಬೌಂಡರಿ, 4 ಸಿಕ್ಸ್), ಆರೋನ್ ಫಿಂಚ್ 58 ರನ್ (28 ಎಸೆತ, 9 ಬೌಂಡರಿ, 2 ಸಿಕ್ಸ್), ಉಮೇಶ್ ಯಾದವ್ 21 ರನ್ ಗಳಿಸಿದರು. ಇನ್ನು ರಾಜಸ್ಥಾನ್ ಪರ ಯಜುವೇಂದ್ರ ಚಾಹಲ್ 5 ವಿಕೆಟ್ ಉರುಳಿಸಿ ಮಿಂಚಿದರು.
ಇದಕ್ಕೂ ಮುನ್ನ ರಾಜಸ್ಥಾನ್ ಪರ ಜೋಸ್ ಬಟ್ಲರ್ 103 ರನ್ (61 ಎಸೆತ, 9 ಬೌಂಡರಿ, 5 ಸಿಕ್ಸ್), ಸಂಜು ಸ್ಯಾಮ್ಸನ್ 38 ರನ್ (19 ಎಸೆತ, 3 ಬೌಂಡರಿ, 2 ಸಿಕ್ಸ್), ಶಿಮ್ರಾನ್ ಹೆಟ್ಮೇಯರ್ 13 ಎಸೆತಗಳಲ್ಲಿ 26 ರನ್ ಚಚ್ಚಿದ್ದರು. ಇನ್ನು ಕೆಕೆಆರ್ ಪರ ಸುನಿಲ್ ನರೈನ್ 2 ವಿಕೆಟ್ ಉರುಳಿಸಿದರೆ, ಶಿವಂ ಮಾವಿ, ಪ್ಯಾಟ್ ಕಮ್ಮಿನ್ಸ್ ಹಾಗೂ ಆಂಡ್ರೆ ರಸೆಲ್ ತಲಾ ಒಂದು ವಿಕೆಟ್ ಪಡೆದುಕೊಂಡಿದ್ದರು.
PublicNext
18/04/2022 11:47 pm