ಮುಂಬೈ: ನಾಯಕ ಫಾಫ್ ಡು ಪ್ಲೆಸ್ಸಿಸ್ ಸಮಯೋಚಿತ ಬ್ಯಾಟಿಂಗ್ ಸಹಾಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 182 ರನ್‌ಗಳ ಗುರಿ ನೀಡಿದೆ.
ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 31ನೇ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡವು ಕೆ.ಎಲ್. ರಾಹುಲ್ ನೇತೃತ್ವದ ಲಕ್ನೋ ಬೌಲರ್‌ಗಳ ದಾಳಿಗೆ ತತ್ತರಿಸಿತು. ವಿರಾಟ್ ಕೊಹ್ಲಿ ಗೋಲ್ಡನ್ ಡಕೌಟ್ ಆದರೆ ಪ್ರಮುಖ ಆಟಗಾರರು 30 ರನ್‌ಗಳ ಗಡಿ ದಾಟಲು ವಿಫಲರಾದರು. ಪರಿಣಾಮ ಆರ್‌ಸಿಬಿ 6 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದೆ.
ಆರ್‌ಸಿಬಿ ಪರ ನಾಯಕ ಫಾಫ್ ಡು ಪ್ಲೆಸ್ಸಿಸ್ 96 ರನ್ (64 ಎಸೆತ, 11 ಬೌಂಡರಿ, 2 ಸಿಕ್ಸ್), ಶಹಬಾಜ್ ಅಹ್ಮದ್ 26 ರನ್, ಗ್ಲೇನ್ ಮ್ಯಾಕ್ಸ್‌ವೆಲ್ 23 ರನ್ ಹಾಗೂ ದಿನೇಶ್ ಕಾರ್ತಿಕ್ ಅಜೇಯ 13 ರನ್ ಗಳಿಸಿದರು. ಇನ್ನು ದುಷ್ಮಂತ ಚಮೀರ ಹಾಗೂ ಜೇಸನ್ ಹೋಲ್ಡರ್ ತಲಾ 2 ವಿಕೆಟ್ ಪಡೆದು ಮಿಂಚಿದರೆ, ಕೃನಾಲ್ ಪಾಂಡ್ಯ ಒಂದು ವಿಕೆಟ್ ಉರುಳಿಸಿದರು.
PublicNext
19/04/2022 09:26 pm