ಮುಂಬೈ: ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಟಗಾರ ಕೀರನ್ ಪೊಲಾರ್ಡ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ ಪೊಲಾರ್ಡ್ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಏಕೆಂದರೆ ಮುಂಬರುವ ಅಕ್ಟೋಬರ್ ತಿಂಗಳಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡದ ನಾಯಕನೇ ವಿದಾಯ ಹೇಳಿರುವುದು ತಂಡಕ್ಕೆ ಹಿನ್ನಡೆಯಾಗಲಿದೆ. ಇದಾಗ್ಯೂ ಫ್ರಾಂಚೈಸಿ ಲೀಗ್ ಕ್ರಿಕೆಟ್ನಲ್ಲಿ ಪೊಲಾರ್ಡ್ ಮುಂದುವರೆಯಲಿದ್ದಾರೆ.
2007ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದ ಮೂಲಕ ಪೋಲಾರ್ಡ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಕಳೆದ 15 ವರ್ಷಗಳಿಂದ ವೆಸ್ಟ್ ಇಂಡೀಸ್ ತಂಡದ ಭಾಗವಾಗಿರುವ ಪೊಲಾರ್ಡ್ 2019ರಿಂದ ವೆಸ್ಟ್ ಇಂಡೀಸ್ ಏಕದಿನ ಮತ್ತು ಟಿ20 ನಾಯಕರಾಗಿದ್ದರು. ಅಲ್ಲದೆ ಕಳೆದ ವರ್ಷ ಟಿ20 ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸಿದ್ದರು.ಇದೀಗ 33 ವರ್ಷದ ಪೊಲಾರ್ಡ್ ತಮ್ಮ ಸುದೀರ್ಘ ವಿಂಡೀಸ್ ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ್ದಾರೆ.
PublicNext
21/04/2022 07:17 am