ಮುಂಬೈ: ಐಪಿಎಲ್ 2022ರ ಭಾಗವಾಗಿ ಇಂದು 33ನೇ ಪಂದ್ಯವು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವುದು ಉಭಯ ತಂಡಗಳಿಗೆ ಅತ್ಯಗತ್ಯವಾಗಿದೆ.
ಮುಂಬೈ ಈಗಾಗಲೇ ಆಡಿರುವ ಎಲ್ಲಾ 6 ಪಂದ್ಯಗಳಲ್ಲೂ ಸೋಲು ಕಂಡಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಅಂದರೆ 10ನೇ ಸ್ಥಾನದಲ್ಲಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಆಡಿರುವ 6 ಪಂದ್ಯಗಳ ಪೈಕಿ 1ರಲ್ಲಿ ಗೆಲುವು ಸಾಧಿಸಿ 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
PublicNext
21/04/2022 01:37 pm