ಮುಂಬೈ: ಜೋಸ್ ಬಟ್ಲರ್ ಶತಕ, ದೇವದತ್ ಪಡಿಕ್ಕಲ್ ಅರ್ಧಶತಕದ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಗೆ 223 ರನ್‌ಗಳ ಗುರಿ ನೀಡಿದೆ.
ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 34ನೇ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ತಂಡವು 2 ವಿಕೆಟ್ ನಷ್ಟಕ್ಕೆ 222 ರನ್ ಚೆಚ್ಚಿದೆ.
ರಾಜಸ್ಥಾನ್ ಪರ ಜೋಸ್ ಬಟ್ಲರ್ 116 ರನ್, ದೇವದತ್ ಪಡಿಕ್ಕಲ್ 54 ರನ್ ಹಾಗೂ ಸಂಜು ಸ್ಯಾಮ್ಸನ್ 46 ರನ್ ಬಾರಿಸಿದರು.ಈ ಮೂಲಕ ಐಪಿಎಲ್ 2022ರ ಆವೃತ್ತಿಯಲ್ಲಿ ಬಟ್ಲರ್ ತಮ್ಮ 3ನೇ ಶತಕ ದಾಖಲಿಸಿದರು.
PublicNext
22/04/2022 09:31 pm