ಮುಂಬೈ: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಟೂರ್ನಿಯ ಭಾಗವಾಗಿ 35ನೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ಮೊದಲು ಬೌಲಿಂಗ್ ಮಾಡಲಿದೆ. ಬಲಿಷ್ಠ ಗುಜರಾತ್ ತಂಡವು ಆಡಿರುವ 6 ಪಂದ್ಯಗಳ ಪೈಕಿ 5ರಲ್ಲಿ ಗೆದ್ದಿದ್ದು, ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇನ್ನು ಕೆಕೆಆರ್ ಆಡಿರುವ 7 ಪಂದ್ಯಗಳಲ್ಲಿ 3ರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.
PublicNext
23/04/2022 03:14 pm