ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಟೂರ್ನಿಯ ಭಾಗವಾಗಿ ನಡೆಯುತ್ತಿರುವ 36ನೇ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನಾಯತ್ವದ ಆರ್‌ಸಿಬಿ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ. ಈ ಬಾರಿ ಆವೃತ್ತಿಯಲ್ಲಿ ಹ್ಯಾಟ್ರಿಕ್ ಸೋಲು ಕಂಡು ಬಳಿಕ ಹ್ಯಾಟ್ರಿಕ್ ಗೆಲುವು ದಾಖಲಿಸಿರುವ ಹೈದರಾಬಾದ್ ತಂಡಕ್ಕೆ ಸೋಲುಣಿಸಲು ಆರ್‌ಸಿಬಿ ಬಿಗ್ ಫೈಟ್ ನೀಡಲಿದೆ.
PublicNext
23/04/2022 07:10 pm