ಮುಂಬೈ: ನಾಯಕ ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಗ್ಲೇನ್ ಮ್ಯಾಕ್ಸ್‌ವೆಲ್ ಸೇರಿ ಎಲ್ಲ ಆಟಗಾರರು ಬ್ಯಾಟಿಂಗ್ ವೈಫಲ್ಯದಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 69 ರನ್‌ಗಳ ಸಾಧಾರಣ ಸವಾಲು ನೀಡಿದೆ.
ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಟೂರ್ನಿಯ ಭಾಗವಾಗಿ ನಡೆಯುತ್ತಿರುವ 36ನೇ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 16.1 ಓವರ್‌ಗಳಲ್ಲಿ ಎಲ್ಲಾ 10 ವಿಕೆಟ್ ಕಳೆದುಕೊಂಡು 68 ರನ್ ಗಳಿಸಲು ಶಕ್ತವಾಯಿತು.
ಇಂದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಫಲ್ಯ ತೋರಿದರು. ಅವರು ಎದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ನಡೆದರು. ಇನ್ನು ದಿನೇಶ್ ಕಾರ್ತಿಕ್, ಅನುಜ್ ರಾವತ್ ಕೂಡ ಒಂದೇ ಒಂದು ರನ್ ಗಳಿಸದೆ ವಿಕೆಟ್ ಕಳೆದುಕೊಂಡರು. ಇತ್ತ ನಾಯಕ ಫಾಫ್ ಡು ಪ್ಲೆಸಿಸ್ 5 ರನ್, ಗ್ಲೇನ್ ಮ್ಯಾಕ್ಸ್‌ವೆಲ್ 12 ರನ್, ಸುಯಾಶ್ ಪ್ರಭುದೇಸಾಯಿ 15 ರನ್, ಶಹಬಾಜ್ ಅಹಮದ್ 7 ರನ್, ಹರ್ಷಲ್ ಪಟೇಲ್ 4 ರನ್, ವನಿಂದು ಹಸರಂಗ ಡಿ ಸಿಲ್ವ 8 ರನ್, ಜೋಶ್ ಹ್ಯಾಜಲ್ವುಡ್ ಅಜೇಯ 3 ರನ್ ಹಾಗೂ ಮೊಹಮ್ಮದ್ ಸಿರಾಜ್ 2 ರನ್ ಗಳಿಸಿದರು.
ಇನ್ನು ಹೈದರಾಬಾದ್ ಪರ ಮಾರ್ಕೊ ಜಾನ್ಸೆನ್ ಹಾಗೂ ಟಿ ನಟರಾಜನ್ ತಲಾ 3 ವಿಕೆಟ್ ಕಿತ್ತು ಮಿಂಚಿದರೆ, ಜಗದೀಶ ಸುಚಿತ್ 2 ವಿಕೆಟ್, ಭುವನೇಶ್ವರ್ ಕುಮಾರ್ ಹಾಗೂ ಉಮ್ರಾನ್ ಮಲಿಕ್ ತಲಾ 1 ವಿಕೆಟ್ ಪಡೆದುಕೊಂಡರು.
PublicNext
23/04/2022 09:07 pm