ಮುಂಬೈ: ಬ್ಯಾಟಿಂಗ್ ವೈಫಲ್ಯ ತೋರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 9 ವಿಕೆಟ್‌ಗಳಿಂದ ಗೆದ್ದು ಬೀಗಿದೆ.
ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಟೂರ್ನಿಯ ಭಾಗವಾಗಿ ನಡೆದ 36ನೇ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 16.1 ಓವರ್‌ಗಳಲ್ಲಿ ಎಲ್ಲಾ 10 ವಿಕೆಟ್ ಕಳೆದುಕೊಂಡು 68 ರನ್ ಗಳಿಸಲು ಶಕ್ತವಾಗಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡವು 8 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 72 ರನ್ ಚಚ್ಚಿ ಗೆದ್ದು ಬೀಗಿದೆ. ತಂಡದ ಪರ ಅಭಿಷೇಕ್ ಶರ್ಮಾ 47 ರನ್ (28 ರನ್), ನಾಯಕ ಕೇನ್ ವಿಲಿಯಮ್ಸನ್ 16 ರನ್ ಹಾಗೂ ರಾಹುಲ್ ತ್ರಿಪಾಠಿ 7 ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಇದಕ್ಕೂ ಮುನ್ನ ಹೈದರಾಬಾದ್ ಪರ ಮಾರ್ಕೊ ಜಾನ್ಸೆನ್ ಹಾಗೂ ಟಿ ನಟರಾಜನ್ ತಲಾ 3 ವಿಕೆಟ್ ಕಿತ್ತು ಮಿಂಚಿದರೆ, ಜಗದೀಶ ಸುಚಿತ್ 2 ವಿಕೆಟ್, ಭುವನೇಶ್ವರ್ ಕುಮಾರ್ ಹಾಗೂ ಉಮ್ರಾನ್ ಮಲಿಕ್ ತಲಾ 1 ವಿಕೆಟ್ ಪಡೆದುಕೊಂಡಿದ್ದರು.
PublicNext
23/04/2022 10:13 pm