ಐಪಿಎಲ್ 2022ರಲ್ಲಿ ಮೂರು ಶತಕಗಳನ್ನು ಸಿಡಿಸಿರುವ ರಾಜಸ್ಥಾನ್ ರಾಯಲ್ಸ್ ತಂಡದ ಓಪನರ್ ಜೋಸ್ ಬಟ್ಲರ್, ಏಳು ಇನ್ನಿಂಗ್ಸ್‌ಗಳಲ್ಲಿ 491 ರನ್ ಗಳಿಸಿದ್ದಾರೆ. ಈ ಮೂಲಕ ಟೂರ್ನಿಯ ಅರ್ಧ ಹಂತದಲ್ಲೇ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಇನ್ನು ಗುಜರಾತ್ ಟೈಟಾನ್ಸ್ ತಂಡ ನಾಯಕ ಹಾರ್ದಿಕ್ ಪಾಂಡ್ಯ ಇಲ್ಲಿಯವರೆಗೆ 295 ರನ್ ಗಳಿಸಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಐಪಿಎಲ್ 2020ರಲ್ಲಿ ಆರೆಂಜ್ ಕ್ಯಾಪ್ ವಿಜೇತರಾಗಿದ್ದ ಇಂದಿನ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆ.ಎಲ್ ರಾಹುಲ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರು 265 ರನ್ ಗಳಿಸಿದ್ದಾರೆ.
PublicNext
24/04/2022 02:02 pm