ಮುಂಬೈ: ನಾಯಕ ಕೆ.ಎಲ್.ರಾಹುಲ್ ಏಕಾಂಗಿ ಹೋರಾಟದ ಶತಕದ ಸಹಾಯದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡಕ್ಕೆ 169 ರನ್‌ಗಳ ಸವಾಲು ನೀಡಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 37ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡವು 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದೆ.
ಲಕ್ನೋ ಪರ ನಾಯಕ ಕೆ.ಎಲ್.ರಾಹುಲ್ ಅಜೇಯ 103 ರನ್ (62 ಎಸೆತಗಳಲ್ಲಿ 12 ಬೌಂಡರಿ, 4 ಸಿಕ್ಸ್) ಸಿಡಿಸಿದರು. ಇದರೊಂದಿಗೆ ಈ ಬಾರಿಯ ಆವೃತ್ತಿಯಲ್ಲಿ ಕೆ.ಎಲ್.ರಾಹುಲ್ ಎರಡನೇ ಬಾರಿಗೆ ಶತಕ ದಾಖಲಿಸಿದ್ದಾರೆ. ಇನ್ನುಳಿದಂತೆ ಮನೀಶ್ ಪಾಂಡೆ 22 ರನ್ ಗಳಿಸಿದರೆ, ಕ್ವಿಂಟನ್ ಡಿ ಕಾಕ್ 10 ರನ್, ದೀಪಕ್ ಹೂಡಾ 10 ರನ್, ಆಯುಷ್ ಬಡೋನಿ 14 ರನ್ ಗಳಿಸಿದರು.
PublicNext
24/04/2022 09:28 pm