ಮುಂಬೈ: ಬ್ಯಾಟಿಂಗ್‌ನಲ್ಲಿ ವೈಫಲ್ಯ ತೋರಿದರೂ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 29 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಪುಣೆ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆದ 39ನೇ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸ್ಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ತಂಡವು 8 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಎಲ್ಲಾ 10 ವಿಕೆಟ್ ನಷ್ಟಕ್ಕೆ .115 ರನ್ ಗಳಿಸಿ ಸೋಲು ಒಪ್ಪಿಕೊಂಡಿದೆ. ಆರ್‌ಸಿಬಿ ಪರ ನಾಯಕ ಫಾಫ್ ಡು ಪ್ಲೆಸ್ಸಿಸಿ 23 ರನ್ ಗಳಿಸಿದರು. ಉಳಿದಂತೆ ವಿರಾಟ್ ಕೊಹ್ಲಿ, ಶಹಬಾಜ್ ಅಹಮ್ಮರ್, ದಿನೇಶ್ ಕಾರ್ತಿಕ್, ಗ್ಲೇನ್ ಮ್ಯಾಕ್ಸ್‌ವೆಲ್ ಬ್ಯಾಟಿಂಗ್ ವೈಫಲ್ಯ ತೋರಿದರು.
ಇದಕ್ಕೂ ಮುನ್ನ ಆರ್‌ಆರ್ ಪರ ರಿಯಾನ್ ಪರಾಗ್ 56 ರನ್ (31 ಎಸೆತ), ನಾಯಕ ಸಂಜು ಸ್ಯಾಮ್ಸನ್ 27 ರನ್ ಗಳಿಸಿದ್ದರು. ಇನ್ನು ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್ವುಡ್ ಹಾಗೂ ವನಿಂದು ಹಸರಂಗ ಡಿ ಸಿಲ್ವ ತಲಾ 2 ವಿಕೆಟ್ ಕಿತ್ತರೆ, ಹರ್ಷಲ್ ಪಟೇಲ್ ಒಂದು ವಿಕೆಟ್ ಪಡೆದುಕೊಂಡರು.
PublicNext
26/04/2022 11:31 pm