ಮುಂಬೈ: ಐಪಿಎಲ್ 2022ರ ಭಾಗವಾಗಿ ಇಂದು (ಬುಧವಾರ) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಎರಡು ತಂಡಗಳು ಕೂಡ ಅದ್ಭುತವಾದ ಫಾರ್ಮ್‌ನಲ್ಲಿದ್ದು ಸತತ ಗೆಲುವಿನೊಂದಿಗೆ ಮುನ್ನುಗ್ಗುತ್ತಿದೆ. ಗುಜರಾತ್ ಹಾಗೂ ಹೈದರಾಬಾದ್ ಉಭಯ ತಂಡಗಳು ಟೂರ್ನಿಯಲ್ಲಿ ಉತ್ತಮ ಫಾರ್ಮನಲ್ಲಿವೆ. ಆಡಿದ 7 ಪಂದ್ಯಗಳಲ್ಲಿ ಒಂದು ಸೋಲು ಅನುಭವಿಸಿದ್ದು 6 ಗೆಲುವುಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಸೋಲು ಕಂಡಿರುವ ಒಂದು ಪಂದ್ಯ ಕೂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧವೇ ಆಗಿರುವುದು ವಿಶೇಷವಾಗಿದೆ.
ಇದೀಗ ಟೂರ್ನಿಯಲ್ಲಿ ಎರಡನೇ ಬಾರಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಜಿಟಿ ಎದುರಿಸುತ್ತಿದ್ದು ಕುತೂಹಲ ಮೂಡಿಸಿದೆ. ಮತ್ತೊಂದೆಡೆ ಆರಂಭಿಕ ಎರಡು ಪಂದ್ಯಗಳನ್ನು ಸೋತ ನಂತರ ಅದ್ಭುತ ರೀತಿಯಲ್ಲಿ ಕಮ್‌ಬ್ಯಾಕ್ ಮಾಡಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲುತ್ತಾ ಅಬ್ಬರಿಸುತ್ತಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
ಸಂಭಾವ್ಯ ಆಡುವ ಬಳಗ
ಗುಜರಾತ್ ಟೈಟಾನ್ಸ್: ಶುಬ್ಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಲ್, ಲಾಕಿ ಫರ್ಗುಸನ್
ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಜಗದೀಶ ಸುಚಿತ್/ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ ನಟರಾಜನ್
PublicNext
27/04/2022 11:18 am