ಮುಂಬೈ: ಡೇವಿಡ್ ವಾರ್ನರ್, ರೋವ್ ಮನ್ ಪೊವೆಲ್, ಅಕ್ಷರ್ ಪಟೇಲ್ ಹೋರಾಟದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್‌ಗಳಿಂದ ಗೆದ್ದು ಬೀಗಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆದ 41ನೇ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 9 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಡೆಲ್ಲಿ 6 ಎಸೆತಗಳು ಬಾಕಿ ಇರುವಂತೆ 6 ವಿಕೆಟ್ ನಷ್ಟಕ್ಕೆ 150 ರನ್ ಚಚ್ಚಿ ಗೆದ್ದು ಬೀಗಿದೆ. ತಂಡದ ಪರ ಡೇವಿಡ್ ವಾರ್ನರ್ 42 ರನ್, ರೊವ್ ಮನ್ ಪೊವೆಲ್ ಅಜೇಯ 33 ರನ್ ಹಾಗೂ ಅಕ್ಷರ್ ಪಟೇಲ್ 24 ರನ್ ಗಳಿಸಿದರು.
ಇದಕ್ಕೂ ಮುನ್ನ ಕೆಕೆಆರ್ ಪರ ನಿತೀಶ್ ರಾಣಾ 57 ರನ್, ಶ್ರೇಯಸ್ ಅಯ್ಯರ್ 42 ರನ್ ಹಾಗೂ ರಿಂಕು ಸಿಂಗ್ 23 ರನ್ ದಾಖಲಿಸಿದ್ದರು. ಇನ್ನು ಡೆಲ್ಲಿ ಪರ ಕುಲದೀಪ್ ಯಾದವ್ 4 ವಿಕೆಟ್, ಮುಸಾಫಿರ್ ರೆಹಮಾನ್ 3 ವಿಕೆಟ್, ಅಕ್ಷರ್ ಪಟೇಲ್ ಹಾಗೂ ಚೇತನ್ ಸಕಾರಿಯಾ ತಲಾ ಒಂದು ವಿಕೆಟ್ ಪಡೆದುಕೊಂಡಿದ್ದರು.
PublicNext
29/04/2022 02:40 am