ಮುಂಬೈ: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸ್ಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಬ್ರಬೋರ್ನ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಟೂರ್ನಿಯ ಭಾಗವಾಗಿ ನಡೆಯುತ್ತಿರುವ 43ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ತಂಡವು ಮೊದಲು ಬೌಲಿಂಗ್ ಮಾಡಲಿದೆ. ಕಳೆದ ಎರಡು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡ ಆರ್‌ಸಿಬಿಗೆ ಈ ಪಂದ್ಯ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಸೆಮಿಫೈನಲ್ ಅರ್ಹತಾ ಪಟ್ಟಿಗೆ ಏರಲು ಇಂದಿನ ಪಂದ್ಯದಲ್ಲಿ ಆರ್‌ಸಿಬಿಗೆ ಗೆಲುವು ಅಗತ್ಯವಾಗಿದೆ.
PublicNext
30/04/2022 03:15 pm