ಮುಂಬೈ: ವಿರಾಟ್ ಕೊಹ್ಲಿ, ರಜತ್ ಪಟಿದಾರ್ ಅರ್ಧಶತಕ, ಗ್ಲೇನ್ ಮ್ಯಾಕ್ಸ್ ವೆಲ್ ಅಬ್ಬರದ ಸಹಾಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡಕ್ಕೆ 171 ರನ್‌ಗಳ ಸವಾಲು ನೀಡಿದೆ.
ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಟೂರ್ನಿಯ ಭಾಗವಾಗಿ ನಡೆಯುತ್ತಿರುವ 43ನೇ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸ್ಸಿಸ್ ಬ್ಯಾಟಿಂಗ್ ಆಯ್ದುಕೊಂಡು ಅಚ್ಚರಿ ಮೂಡಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 6 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿದೆ.
ಆರ್‌ಸಿಬಿ ಪರ ವಿರಾಟ್ ಕೊಹ್ಲಿ 58 ರನ್ (53 ಎಸೆತ), ರಜತ್ ಪಟಿದಾರ್ 52 ರನ್ (32 ಎಸೆತ) ಹಾಗೂ ಗ್ಲೇನ್ ಮ್ಯಾಕ್ಸ್‌ವೆಲ್ 33 ರನ್ ಗಳಿಸಿದರು. ಇನ್ನು ಗುಜರಾತ್ ಟೈಟಾನ್ಸ್ ಪರ ಪ್ರದೀಪ್ ಸಾಂಗ್ವಾನ್ 2 ವಿಕೆಟ್, ಮೊಹಮ್ಮದ್ ಶಮಿ, ರಶೀದ್ ಖಾನ್, ಅಲ್ಜಾರಿ ಜೋಸೆಫ್ ಹಾಗೂ ಲಾಕಿ ಫರ್ಗುಸನ್ ತಲಾ 1 ವಿಕೆಟ್ ಪಡೆದುಕೊಂಡರು.
PublicNext
30/04/2022 05:21 pm